ಯುನೆಸ್ಕೋ ಮೇಲ್ವಿಚಾರಣೆ ಸಭೆಗೆ ರಾಜಮನೆತನ ಸೇರಿ ಸ್ಥಳೀಯರನ್ನು ಆಹ್ವಾನಿಸುವಲ್ಲಿ ನಿರ್ಲಕ್ಷ್ಯ ಆಕ್ರೋಶ












ಕಿಷ್ಕಿಂಧವಾಣಿ ಸುದ್ದಿ
ಹಗರಿಬೊಮ್ಮನಹಳ್ಳಿ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಪಟ್ಟಣದ ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಖಾಸಗಿ ಶಾಲೆಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲ ವಾಣಿಜ್ಯ ಹಾಗೂ ಖಾಸಗಿ ಸಂಸ್ಥೆಗಳ ನಾಮಫಲಕಗಳಲ್ಲಿ ಸರ್ಕಾರದ ನಿಯಮದಂತೆ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಹಗರಿಬೊಮ್ಮನಹಳ್ಳಿ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕನ್ನಡ ಭಾಷೆ ನಾಡಿನ ಅಸ್ಮಿತೆ, ಸಂಸ್ಕೃತಿ, ಪರಂಪರೆ ಹಾಗೂ ಕನ್ನಡಿಗರ ಸ್ವಾಭಿಮಾನದ ಪ್ರತೀಕವಾಗಿದೆ. ಕನ್ನಡ ನಾಡಿನಲ್ಲಿ ವ್ಯಾಪಾರ-ವಹಿವಾಟು ನಡೆಸುವ ಪ್ರತಿಯೊಂದು ಸಂಸ್ಥೆಯೂ ಕನ್ನಡ ಭಾಷೆಗೆ ಗೌರವ ನೀಡಬೇಕು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಗೆ ಆದ್ಯತೆ ನೀಡಿ, ಉಳಿದ ಶೇ.40ರಷ್ಟು ಇತರ ಭಾಷೆಗಳಿಗೆ ಅವಕಾಶ ಕಲ್ಪಿಸುವ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣದ ಸಣ್ಣ ಅಂಗಡಿಗಳಿಂದ ಹಿಡಿದು ದೊಡ್ಡ ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಆಸ್ಪತ್ರೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಸ್ಪಷ್ಟವಾಗಿ ಮತ್ತು ಪ್ರಮುಖವಾಗಿ ಕಾಣಿಸಬೇಕು. ಇದರಿಂದ ಸ್ಥಳೀಯ ಜನರಿಗೆ ಅನುಕೂಲವಾಗುವುದರ ಜೊತೆಗೆ ಕನ್ನಡ ಭಾಷೆಯ ಗೌರವವೂ ಹೆಚ್ಚಲಿದೆ ಎಂದು ತಿಳಿಸಿದರು.
ಸರ್ಕಾರದ ಆದೇಶಗಳು ಕೇವಲ ಕಾಗದಕ್ಕೆ ಸೀಮಿತವಾಗದೆ, ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಈ ನಿಟ್ಟಿನಲ್ಲಿ ಪುರಸಭೆ ಅಧಿಕಾರಿಗಳು ಪಟ್ಟಣದಾದ್ಯಂತ ಪರಿಶೀಲನೆ ನಡೆಸಿ, ನಿಯಮ ಪಾಲಿಸದ ಸಂಸ್ಥೆಗಳಿಗೆ ಸೂಕ್ತ ಸೂಚನೆ ನೀಡಿ, ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ವ್ಯಾಪಾರಸ್ಥರು ಹಾಗೂ ಖಾಸಗಿ ಸಂಸ್ಥೆಗಳ ಮಾಲೀಕರಲ್ಲಿ ಕನ್ನಡ ಭಾಷೆಯ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಒತ್ತಾಯಿಸಿದರು.
ಕನ್ನಡವೇ ಮೊದಲು, ಕನ್ನಡವೇ ಪ್ರಧಾನ ಎಂಬ ಆಶಯದೊಂದಿಗೆ ಕನ್ನಡ ಭಾಷೆಯ ಅಸ್ತಿತ್ವ ಮತ್ತು ಗೌರವವನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಕೋಟ್ರೇಶ್ ತಳವಾರ, ಸಮಾಜಸೇವಕಿ ಹಾಗೂ ಚಿತ್ರಕಲಾವಿದೆ, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಉಮೇಶ್ ಪಾಳೆಗಾರ್, ಸೋಮಶೇಖರ್ ಒಬಳಾಪುರ ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿ. ದೇವೇಂದ್ರಪ್ಪ ಉಪಸ್ಥಿತರಿದ್ದರು.

ಕಿಷ್ಕಿಂಧವಾಣಿ ಸುದ್ದಿ
ಹಗರಿಬೊಮ್ಮನಹಳ್ಳಿ:
ರೈಲ್ವೆ ಹಳಿ ದಾಟುವಾಗ ವ್ಯಕ್ತಿಯೊರ್ವನ ಮೇಲೆ ರೈಲು ಹರಿದು ಮೃತಪಟ್ಟ ಘಟನೆ ಪಟ್ಟಣದ ಕೆವಿಆರ್ ಕಾಲೋನಿ ಹಾಗೂ ಹಳೆಯ ಬಸ್ ನಿಲ್ದಾಣ ಮಧ್ಯೆ ಇರುವ ರೈಲ್ವೇ ಹಳಿಯ ಬಳಿ ಜರುಗಿದೆ.
ಮೃತಪಟ್ಟ ವ್ಯಕ್ತಿಯನ್ನು ರವಿ ರೆಡ್ಡಿ (40) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಸುಮಾರು 7 ಗಂಟೆಗೆ ಈ ಘಟನೆ ಸಂಭವಿಸಿದೆ. ಮೃತ ರವಿ ರೆಡ್ಡಿ ಅವರು ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.