Breaking News
ಹೇಮಗುಡ್ಡ ಟೋಲ್ ಗೇಟ್ ಬಳಿ ಪರಮಪೂಜ್ಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಂದ ಭವ್ಯ ಸ್ವಾಗತ

 

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ನಗರದಲ್ಲಿ ಇಂದು ನಡೆಯಲಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪರಮಪೂಜ್ಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಹೇಮಗುಡ್ಡದ ಬಳಿಯ ಟೋಲ್ ಗೇಟ್ ಬಳಿ ಭಕ್ತಿಭಾವದಿಂದ ಬರಮಾಡಿಕೊಂಡರು.

ಶಾಸಕರು ಸ್ವಾಮೀಜಿಗಳಿಗೆ ಆತ್ಮೀಯವಾಗಿ ಸ್ವಾಗತ ಕೋರಿ ಗೌರವ ಸಲ್ಲಿಸಿದರು. ಈ ವೇಳೆ ಮಾಜಿ ಸಂಸದ ಶಿವರಾಮ ಗೌಡ,ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ

 ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾರಿ ಉತ್ಸಾಹದಿಂದ ಉಪಸ್ಥಿತರಿದ್ದು, ಶ್ರೀಗಳ ಆಗಮನವನ್ನು ಸಂಭ್ರಮದಿಂದ ಸ್ವಾಗತಿಸಿದರು.

Leave a Reply

Your email address will not be published. Required fields are marked *

error: Content is protected !!