Breaking News
ಗಂಗಾವತಿ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ಬೆಂಕಿಯ ಕೆನ್ನಾಲಿಗೆ: ಕಿಡಿಗೇಡಿಗಳ ದುಷ್ಕೃತ್ಯ. *ಬೆಂಕಿ ಹೊತ್ತಿಕೊಂಡು ಮೂರು ತಾಸು ಕಳೆದರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು.

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಇದೀಗ ಬೇಸಿಗೆ ಆರಂಭವಾಗಿದ್ದು ಅರಣ್ಯ ಪ್ರದೇಶದಲ್ಲಿ ಕಾಡಗಿಚ್ಚು ಕಾಣಿಸಿಕೊಳ್ಳುವ ಸಂಭವ ಹೆಚ್ಚಿದೆ. ಶುಕ್ರವಾರ ಸಂಜೆ ಗಂಗಾವತಿ ನಗರದ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬೆಟ್ಟ ಪ್ರದೇಶವನ್ನು ವ್ಯಾಪಿಸಿದ್ದು ಅಪಾರ ಪ್ರಮಾಣದ ಸಸ್ಯ ಮತ್ತು ಜೀವಜಂತುಗಳು ಬೆಂಕಿಗೆ ಆಹುತಿಯಾಗಿವೆ. ಸಂಜೆ ನಾಲ್ಕು ಗಂಟೆಯಿಂದ ಆರಂಭವಾಗಿರುವ ಬೆಂಕಿ ಇಡೀ ಬೆಟ್ಟವನ್ನು ವ್ಯಾಪಿಸಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಯಾವ ಸಿಬ್ಬಂದಿಯೂ ಭೇಟಿ ನೀಡಿಲ್ಲ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮಾಡಿಲ್ಲ. ಜನಸಾಮಾನ್ಯರು ಬೆಟ್ಟಕ್ಕೆ ಬೆಂಕಿ ಹತ್ತಿರುವುದನ್ನು ತಮ್ಮ ಮೊಬೈಲ್ಗಳಲ್ಲಿ ಫೋಟೋ ಮತ್ತು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದಾರೆ.
ನಗರಕ್ಕೆ ಹೊಂದಿಕೊಂಡಿರುವ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ನಿತ್ಯವೂ ವಾಯುಹಾರಕ್ಕೆ ಜನರು ತೆರುಳುತ್ತಿದ್ದು ಈ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಕುರಿತು ಅನುಮಾನಗಳು ವ್ಯಕ್ತವಾಗುತ್ತವೆ.
ಮಳೆ ಮಲ್ಲೇಶ್ವರ ಬೆಟ್ಟ ಗಂಗಾವತಿ ನಗರಕ್ಕೆ ಹೊಂದಿಕೊಂಡಿರುವುದು ಅರಣ್ಯ ಇಲಾಖೆಯವರು ಬೆಟ್ಟಕ್ಕೆ ತಂತಿ ಬೇಲಿಯನ್ನು ಅಳವಡಿಸುವ ಮೂಲಕ ಬೆಟ್ಟ ಪ್ರವೇಶದಂತೆ ಜನರನ್ನು ತಡೆಯುವ ಕ್ರಮ ಕೈಗೊಂಡಿಲ್ಲ ಆದ್ದರಿಂದ ಈ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ, ಮರಂ ಸಾಗಾಣಿಕೆ ನಿರಂತರವಾಗಿ ನಡೆದಿದೆ. ಇದೀಗ ದುಷ್ಕರ್ಮಿಗಳು
ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗುತ್ತಿದೆ.

ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ:ಭಾರತ ಫೈನಲ್ ಗೆ ಪ್ರವೇಶ.

ಕಿಷ್ಕಿಂಧವಾಣಿ ಸುದ್ದಿ
ಮುಂಬೈ: ಟಿ20 ವಿಶ್ವ ಕ್ರಿಕೆಟ್ ನ ಭಾರತ ಮತ್ತು ಇಂಗ್ಲೆಂಡ್ ಪಂದ್ಯಾವಳಿ ಗುರುವಾರ  ಮುಂಬೈನ ವಾಂಖಡೆ ಕ್ರಿಕೆಟ್ ಮೈದಾನದಲ್ಲಿ ಜರುಗಿತು, ಈ ಪಂದ್ಯಾವಳಿಯಲ್ಲಿ ಜಸ್ಪ್ರೀತ್ ಬ್ರೂಮ್ರಾ ಹಾಗೂ ಸಂಜೀವ ಶಾಮಸನ್ ಅಮೋಘ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್ ಅನ್ನು ಮಣಿಸಿದರು. ಅತ್ಯಂತ ರೋಮಾಂಚಕಾರಿಘಟ್ಟದಲ್ಲಿ ಕೊನೆಯ ಅವಧಿಯ ಬಾಲಿಂಗ್ ನಲ್ಲಿ ಭಾರತವನ್ನು ಗೆಲ್ಲಿಸುವಲ್ಲಿ ಇವರಿಬ್ಬರು ಕಾರಣೀಕರ್ತರಿದ್ದಾರೆ
ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 07ವಿಕೇಟಗಳ ನಷ್ಟಕ್ಜೆ
253 ರನ್ ಗಳಿಸಿದರು.ಇದರ ಬೆನ್ನಟ್ಟಿದ ಇಂಗ್ಲೆಂಡ್ ನವರು 07ವಿಕೇಟ್ ಗಳ ನಷ್ಟ 246 ಗಳಿಸಿ 07 ರನ್ ಅಂತರದಲ್ಲಿ ಭಾರತ ಗೆಲುವು ಪಡೆಯಿತು.
ಫೈನಲ್ ಪಂದ್ಯಾವಳಿ ಗುಜರಾತ್ ನ ಅಹಮದಾಬಾದ್ ನಲ್ಲಿ ಮಾ.08 ರಂದು ಸಂಜೆ 07 ಗಂಟೆಗೆ ನಡೆಯಲಿದೆ.

ಹಂಪಪಟ್ಟಣ:ಶಾಲೆಯಲ್ಲಿ ಮಕ್ಕಳಿಂದ ಅನುಚಿತ ಕಾರ್ಯ,ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ. * ಇಬ್ಬರು ಶಿಕ್ಷಕರ ವರ್ಗಾವಣೆಗೆ ಒತ್ತಾಯ.

ಕಿಷ್ಕಿಂಧವಾಣಿ ಸುದ್ದಿ

ಹಗರಿಬೊಮ್ಮನಹಳ್ಳಿ : ತಾಲೂಕಿನ ಹಂಪಾಪಟ್ಟಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಅನುಚಿತ ಕಾರ್ಯ ಮಾಡಿಸಿದ ಇಬ್ಬರು ಶಿಕ್ಷಕರನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿ ಬಿಇಓಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತ ಮುಖಂಡ ಬಂಟರ ಕುಬೇರ ಮಾತನಾಡಿ, ಶಿಕ್ಷಕರನ್ನು ದೇವರ ಸಮವಾಗಿ ಕಾಣುವ ನಮ್ಮ ಗ್ರಾಮದ ವಿದ್ಯಾರ್ಥಿಗಳಿಗೆ ಶಿಕ್ಷಕರಿಬ್ಬರ ಅನುಚಿತ ವರ್ತನೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಕುಂಠಿತವಾಗತೊಡಗಿದೆ ಎಂದು ನೋವನ್ನು ತೋಡಿಕೊಂಡರು.

ಪ್ರಭಾರಿ ಮುಖ್ಯ ಶಿಕ್ಷಕ ಮತ್ತು ದೈಹಿಕ ಶಿಕ್ಷಕ ಇವರಿಬ್ಬರನ್ನು ಈ ಕೂಡಲೇ ಬೇರೆ ಕಡೆ ವರ್ಗಾವಣೆ ಮಾಡಿ ಶಾಲೆಯಲ್ಲಿ ನಡೆಯುತ್ತಿರುವ ದುರ್ವತನೆ ಬಗ್ಗೆ ನ್ಯಾಯ ಸಮ್ಮತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಈ ಕೂಡಲೆ ಕ್ರಿಮಿನಲ್ ಕೇಸ್ ದಾಖಲಿಸಿ ಸಸ್ಪೆಂಡ್ ಮಾಡಬೇಕೆಂದರು.

ನಮ್ಮೂರಿನ ಶಾಲೆಯಲ್ಲಿ ಇಂಥ ಘಟನೆಗಳು ಯಾವತ್ತು ನಡೆದಿರಲಿಲ್ಲ, ಆದರೆ ಯಾರದ್ದೋ ವೈಯಕ್ತಿಕ ಕಾರಣದಿಂದ ಈ ಘಟನೆ ನಡೆದುಹೋಗಿದೆ ಇದರಿಂದ ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ ಎಂದರು. ನಮ್ಮ ಶಾಲೆಯಲ್ಲಿ ನಡೆದ ಘಟನೆ ಪೊಲೀಸ್ ಠಾಣೆಯವರಿಗೆ ಹೋಗಿರುವುದು ದುರದೃಷ್ಟಕರ ಸಂಗತಿ. ಇದರಿಂದ ಶಾಲೆಗೆ ಕಪ್ಪು ಚುಕ್ಕಿ ಬಂದಂತಾಗಿದೆ ಎಂದರು.

ಈ ಕೊಡಲೇ ಶಿಕ್ಷಕರಿಬ್ಬರನ್ನು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವರ್ಗಾವಣೆ ಮಾಡುವುದಷ್ಟೇ ಅಲ್ಲ. ಶಿಕ್ಷಣ ಇಲಾಖೆಯ ನಿಯಮಾನುಸಾರ ತನಿಖೆ ಮಾಡಿ, ತಪ್ಪಿತಸ್ಥ ಶಿಕ್ಷಕರನ್ನು ಸಸ್ಪೆಂಡ್ ಮಾಡಬೇಕು ಎಂದು ಎಸ್ ಡಿ ಎಮ್ ಸಿ ಅಧ್ಯಕ್ಷ ವಿ, ಹನುಮಂತ ಆಗ್ರಹಿಸಿದರು,

ಈ ಸಂಧರ್ಭದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬುಡ್ಡಿ ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯ ಬಿ ನಾಗರಾಜ್, , ನವೋದಯ ಯುವಕ ಸಂಘದ ಅಧ್ಯಕ್ಷ ಉಪ್ಪಾರ್ ಹನುಮಂತ, ಗ್ರಾಮದ ರೈತ ಮುಖಂಡ ಬಂಟರ ಸೋಮಣ್ಣ, ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಬಳಗದ ಸೇರಗಾರ್ ಸೋಮನಾಥ್, ತಳವಾರ್ ರಾಮು, ಸೀಗೇನಹಳ್ಳಿ ಚಂದ್ರು, ಸಿ, ಪ್ರಹ್ಲಾದ್, ಸೀಗೆನಹಳ್ಳಿ ಬಸವರಾಜ, ಹನುಮಂತ ಎಚ್ ತೀರ್ಥ ಪ್ರಸಾದ್, ಹೆಚ್ ಅಶೋಕ್, ಪತ್ರಿ ಯಲ್ಲಪ್ಪ ಸೀಗೇನಹಳ್ಳಿ ಮಾರುತಿ, ಸೋಮನಾಥ ಭಜಂತ್ರಿ, ಬರದರೂ ಸೋಮು ಇತರರು ಇದ್ದರು

*”ಹಂಪಾಪಟ್ಟಣದ ಶಾಲೆಯಲ್ಲಿ ಜರುಗಿರುವ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ

ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ.ವರದಿಯನ್ನು ಡಿಡಿಪಿಐ ಅವರಿಗೆ ಸಲ್ಲಿಸಲಾಗುತ್ತದೆ.”

-ಪ್ರಭಾಕರ ಬಿಇಓ ಹಗರಿಬೊಮ್ಮನಹಳ್ಳಿ.

ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿಯಿಂದ ಪ್ರಥಮ‌ವಾಗಿ ಚುನಾಯಿತ ಜನಪ್ರತಿನಿಧಿಯಾಗಿದ್ದ ಕೆ ವೆಂಕಟರಾವ್ ಕಲ್ಗುಡಿ ನಿಧನ. *ತಾ.ಪಂ.ಮೂಲಕ ಬಿಜೆಪಿ ಜಿಲ್ಲೆಯಲ್ಲಿ ಖಾತೆ ಆರಂಭಕ್ಕೆ ಕಾರಣರಾಗಿದ್ದರು

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಭಾರತೀಯ ಜನತಾ ಪಕ್ಷದಿಂದ ತಾ.ಪಂ.ಚುನಾವಣೆಯಲ್ಲಿ ಗೆದ್ದು ಬಿಜೆಪಿ ಖಾತೆ ಆರಂಭಿಸಿದ್ದ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ವೆಂಕಟರಾವ್ ಜಂಗಮರ ಕಲ್ಗುಡಿ(69) ಇವರು ಜಂಗಮರ ಕಲ್ಗುಡಿ ಗ್ರಾಮದ ತಮ್ಮ ನಿವಾಸದಲ್ಲಿ ಬುಧವಾರ ಸಂಜೆ 07 ಗಂಟೆಗೆ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಒರ್ವ ಪುತ್ರ,ಪುತ್ರಿ ಇದ್ದಾರೆ.
2000 ಇಸವಿಯಲ್ಲಿ ಜರುಗಿದ್ದ ತಾ.ಪಂ.ಜಿ.ಪಂ.ಚುನಾವಣೆಯಲ್ಲಿ ಬಿಜೆಪಿ ಬಿ ಫಾರಂ ಪಡೆದು ಗೆಲುವು ಪಡೆದು ಇಡೀ ಜಿಲ್ಲೆಯಲ್ಲಿ ಬಿಜೆಪಿ ಖಾತೆ ಆರಂಭಕ್ಕೆ ಕಾರಣರಾಗಿದ್ದರು.
ಮೃತರ ಅಂತ್ಯಕ್ರಿಯೆ ಮಾ.05 ರಂದು ಬೆಳಗ್ಗೆ 8:00ಗೆ ಅಂತ್ಯಕ್ರಿಯೆ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನೆರವೇರಲಿದೆ.
ಸಂತಾಪ: ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಖಾತೆಯನ್ನು ಆರಂಭಿಸಿ ಢಣಾಪುರ ತಾಲೂಕ ಪಂಚಾಯತಿನಿಂದ ಬಿಜೆಪಿ ಸದಸ್ಯರಾಗಿ ಗೆಲುವು ಪಡೆದಿದ್ದ ವೆಂಕಟರಾವ್ ನಿಧನಕ್ಕೆ ಶಾಸಕ ಗಾಲಿ ಜನಾರ್ದನ್ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ದಡೆಸೂಗೂರು ಬಸವರಾಜ, ಮಾಜಿ ಸಂಸದರಾದ ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮನವಳ್ಳಿ, ಜಿ.ವೀರಪ್ಪ, ಮುಖಂಡರಾದ ಸಿಂಗನಾಳ ವಿರುಪಾಕ್ಷಪ್ಪ,ಯಡ್ಲಪಲ್ಲಿ
ಆನಂದರಾವ್ ,ಟಿ.ವಿ.ಸತ್ಯನಾರಾಯಣ, ಎಂ.ಸತ್ಯನಾರಾಯಣ, ಜಾನಕೀರಾಮ್
ಸೇರಿ ಬಿಜೆಪಿ ಮುಖಂಡರು, ಜಂಗಮರ ಕಲ್ಗುಡಿ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಾಲ್ಮೀಕಿಶ್ರೀಗಳ ಕ್ಷೇಮ ವಿಚಾರಿಸಿದ ಕೆಎಂಎಫ್ ಬಳ್ಳಾರಿ ಮಾಜಿ ಅಧ್ಯಕ್ಷ ಭೀಮ್ ನಾಯ್ಕ್

ಹಗರಿಬೊಮ್ಮನಹಳ್ಳಿ:
ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಡಾ.ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಯವರ ಆರೋಗ್ಯ -ಕ್ಷೇಮವನ್ನು ಮಡಿವಾಳ ಗುರುಪೀಠದ ಪೀಠಾಧಿಪತಿ ಬಸವಮಾಚಿದೇವ ಪರಾಮಪೂಜ್ಯರ ದಿವ್ಯ ಉಪಸ್ಥಿತಿಯಲ್ಲಿ ಕೆಎಂಎಫ್ ಬಳ್ಳಾರಿಯ ಮಾಜಿ ಅಧ್ಯಕ್ಷ ಭೀಮ್ ನಾಯ್ಕ್ ಕುಶಲೋಪಚರಿ ವಿಚಾರಿಸಿ ಉಭಯ ಶ್ರೀಗಳನ್ನು ಸತ್ಕರಿಸಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪೂಜ್ಯ ವಾಲ್ಮೀಕಿ ಶ್ರೀಗಳು ಲಘು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು,ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ.
ಶ್ರೀಗಳು ವಾಲ್ಮೀಕಿ ಸಮುದಾಯ ಸೇರಿದಂತೆ ಲೋಕ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡುಪಿಟ್ಟು ಶ್ರಮಿಸಿ ಭಕ್ತ ವೃಂದಕ್ಕೆ ಹಾಗೂ ಸಮುದಾಯದ ಸೇವೆಗೆ ಶ್ರೀಗಳ ಮಾರ್ಗದರ್ಶನ ಅವಶ್ಯಕತೆ ಇದ್ದು ಮಹಾ ಸ್ವಾಮೀಜಿಗಳು ಆದಷ್ಟು ಬೇಗ ಪೂರ್ಣ ಗುಣಮುಖರಾಗಲಿ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮರಿರಾಮಪ್ಪ ಸೇರಿ ಹಗರಿಬೊಮ್ಮನಹಳ್ಳಿ
ವಾಲ್ಮೀಕಿ ಸಮುದಾಯದ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸಮುದಾಯದ ಹಿರಿಯರು ಹಾಗೂ ಎಲ್ಲಾ ಸಮುದಾಯದ ಮುಖಂಡರು ಸೇರಿದಂತೆ ಹಿರಿಯರಿದ್ದರು.

ಹೋಳಿ ಹಬ್ಬ:ಸಾಣಾಪೂರ ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ಗಾಂಧಿನಗರದ ಇಬ್ಬರು ಯುವಕರು ನೀರು ಪಾಲು! *ಪ್ರತಿವರ್ಷ ಪೊಲೀಸರ ಮುನ್ನೆಚ್ಚರಿಕೆ ಮಧ್ಯ ಅನಾಹುತ ಗ್ಯಾರಂಟಿ!

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಹೋಳಿ ಹಬ್ಬದ ರಂಗೀನಾಟ ಮುಗಿಸಿಕೊಂಡು ಸಾಣಾಪೂರ ಹತ್ತಿರ ತುಂಗಭದ್ರಾ ನದಿಯ ಫಾಲ್ಸ್ ನಲ್ಲಿ ಸ್ನಾನಕ್ಕೆ ತೆರಳಿದ್ದ ಗಂಗಾವತಿ ಗಾಂಧಿನಗರದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಜರುಗಿದೆ.
ಗಾಂಧಿನಗರದ ನಿವಾಸಿಗಳಾದ
ಅಭಿಷೇಕ(೧೮),ಸೂರ್ಯ (೧೯) ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಹೋಳಿ ಹಬ್ಬದ ಆಚರಣೆಯು ನಂತರ ಗೆಳೆಯರ ಜೊತೆ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಮಧ್ಯಾನ್ಹ 3 ಗಂಟೆಗೆ ಆಗಮಿಸಿದ್ದರು.ಈ ಸಂದರ್ಭದಲ್ಲಿ ಸಾಣಾಪೂರ ಹತ್ತಿರದ ಫಾಲ್ಸ್ ಹೋಗದಂತೆ ಅಲ್ಲಿದ್ದವರು ಎಚ್ಚರಿಕೆ ನೀಡಿದ್ದಾರೆ.ಆದಾಗ್ಯೂ ನದಿಗೆ ಮೃತಪಟ್ಟವರು ಸ್ನಾನಕ್ಕೆ ಹೋಗಿದ್ದರಿಂದ ಅನಾಹುತ ಸಂಭವಿಸಿದೆ.
ಸ್ಥಳೀಯರು ಹಾಗೂ ಗ್ರಾಮೀಣ ಪೊಲೀಸರು ಹರ ಸಾಹಸ ಪಟ್ಟು ನದಿಯಲ್ಲಿ ಮುಳುಗಿದ್ದ ಯುವಕರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

*ತಿರುಪತಿ ನಾಯಕ ಪಿಲಿಗುಂಡ ಗೆ * ರಾಜ್ಯ ಮಟ್ಟದ ಸರ್ವೋತ್ತಮ ಕ್ರೀಡಾ ಸೇವರತ್ನ ಪ್ರಶಸ್ತಿ.

ಕಿಷ್ಕಿಂಧವಾಣಿ ಸುದ್ದಿ
ಕೊಪ್ಪಳ:-ತಾಲ್ಲೂಕಿನ ಮುನಿರಾಬಾದ
ವಿಜಯನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ತಿರುಪತಿ ನಾಯಕ ಇವರಿಗೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ನೇತ್ರ ಕಲಾ ಸಂಘ ವತಿಯಿಂದ ನೀಡುವ ರಾಜ್ಯ ಮಟ್ಟದ ಸರ್ವೋತ್ತಮ ಕ್ರೀಡಾ ಸೇವಾ ರತ್ನ ಲಭಿಸಿದೆ,
ತಿರುಪತಿ ನಾಯಕ ದೈಹಿಕ ಶಿಕ್ಷಣ ಉಪನ್ಯಾಸಕರು ಇವರು ಕಳೆದ 10 ವರ್ಷಗಳ ದಿಂದ ವಿದ್ಯಾರ್ಥಿಗಳನ್ನು ಜಿಲ್ಲಾ, ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟ ಕ್ಕೆ ಆಯ್ಕೆಯಾಗುವಲ್ಲಿ ಇವರ ಪಾತ್ರ ಬಹುದೊಡ್ಡದು. ಬಳ್ಳಾರಿ ಯ ಡಾ.ಜೋಳದ ರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಮಾರ್ಚ್ 8 ರಂದು ಆಯೋಜಿಸಿರುವ ಸಮಾರಂಭದಲ್ಲಿ
ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಬಂಜಾರ ರಾಷ್ಟ್ರೀಯ ಹೋಳಿ ಉತ್ಸವ-2026:ಯಶಸ್ವಿಯಾಗಿ ನಡೆದ ಬಂಜಾರ ಕವಿಗೋಷ್ಠಿ.

ಕಿಷ್ಕಿಂಧವಾಣಿ ಸುದ್ದಿ

ಕೊಪ್ಪಳ: ಹೋಳಿ ಹುಣ್ಣಿಮೆಯಂದು ನಡೆಯುವ ಹೋಳಿ ಹಬ್ಬವು ಬಂಜಾರ ಸಮುದಾಯದ ಅತ್ಯಂತ ಪ್ರಮುಖ ಆಚರಣೆಯಾಗಿದೆ. ಎಲ್ಲಾ ತಾಂಡಾಗಳಲ್ಲೂ ಮಹಿಳೆ ಹಾಗೂ ಪುರುಷರು ವಿಶಿಷ್ಟ ಶೈಲಿಯ ಉಡುಪುಗಳನ್ನು ಧರಿಸಿ ಕೋಲುಗಳನ್ನು ಹಿಡಿದು ಬಂಜಾರ ಜಾನಪದ ಹಾಡುಗಳನ್ನು ಹಾಡುತ್ತಾ ವೃತ್ತಾಕಾರದಲ್ಲಿ ನಗಾರಿ ಹಾಗೂ ತಮಟೆಯ ತಾಳಕ್ಕೆ ಕುಣಿದು ಉತ್ಸಾಹದಿಂದ ಆಚರಿಸುತ್ತಾರೆ.

ಅದೇರೀತಿ ಕೊಪ್ಪಳದ ಐತಿಹಾಸಿಕ ಬಹಾದ್ದೂರ ಬಂಡೆಯಲ್ಲಿ ಇರುವ ಹಾತಿರಾಮ ಬಾವಾಜಿ ರವರ ಕಟ್ಟೆ ಆವರಣದಲ್ಲಿ ಮಾ-3 ರಂದು ಮಹಿಳೆಯರ ಘೂಮರ್ ನೃತ್ಯ, ಡೊಡೋ ನಂಗಾರ ನೃತ್ಯ, ಪುರುಷರ ಲೆಹಂಗಿ ನೃತ್ಯ, ವಾಜಾ-ಭಜನೆ ಅತ್ಯಂತ ಅದ್ಧೂರಿಯಾಗಿ ನಡೆದವು. ಇವರು ತಮ್ಮ ಹಾಡುಗಳಲ್ಲಿ ಹೋಳಿಯ ಹಿನ್ನೆಲೆ, ಸಂಪ್ರದಾಯ, ಪರಂಪರೆ ಕುರಿತು ಹೇಳುತ್ತಾ ಇಡೀ ರಾತ್ರಿ ಸಂಭ್ರಮಿಸಿ ಬೆಳಗಿನ ಜಾವ ಹೋಳಿ ದಹನ ಮಾಡಿ ಸಂಪನ್ನಗೊಳಿಸಿದರು. ಬಂಜಾರ ಸಮುದಾಯದ ವಿಶಿಷ್ಠ ಭಾಷೆ, ಕಲೆ, ಸಂಸ್ಕೃತಿ, ಪರಂಪರೆ ಹಬ್ಬ-ಹರಿದಿನಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೋಳಿ ಹುಣ್ಣಿಮೆಯಂದು ರಾಷ್ಟ್ರೀಯ ಹೋಳಿ ಉತ್ಸವ-2026 ರ ನಿಮಿತ್ಯ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು,

ರಾಜ್ಯ ಘಟಕದ ವತಿಯಿಂದ ಉತ್ಸವದ ವೇದಿಕೆಯಲ್ಲಿ ಬಂಜಾರರ ಸಾಹಿತ್ಯದ ರಾಜ್ಯ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿತ್ತು,

ಈ ಕವಿಗೋಷ್ಠಿಯಲ್ಲಿ ರಾಜ್ಯದ ಮೂಲೆಮೂಲೆಯಿಂದ ಐವತ್ತಕ್ಕೂ ಹೆಚ್ಚು ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗಂಗಾವತಿಯ ಎಸ್.ಆರ್. ಸರೋಜಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಇತಿಹಾಸ ಸಂಶೋಧಕ ಡಾ. ರವಿ ಚವ್ಹಾಣ ಮಾತನಾಡಿ, ಬಂಜಾರರ ಮೂಲ ಇತಿಹಾಸ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಕವನಗಳ ಮೂಲಕ ಪ್ರಚುರಪಡಿಸಿದ್ದು ಬಹಳ ಹೆಮ್ಮೆಯ ವಿಷಯ, ಸಮುದಾಯದ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಾಹಿತ್ಯದ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವುದಕ್ಕಾಗಿ ಕವಿಗೋಷ್ಠಿ ಸಹಕಾರಿಯಾಗಿದೆ, ಇಂದಿನ ಯುವ ಪೀಳಿಗೆ ಮೊಬೈಲ್ ಹಾಗೂ ಡಿ.ಜೆ. ಹುಚ್ಚಿನಿಂದ ಹೊರಬಂದು ಉನ್ನತ ವಿದ್ಯಾಭ್ಯಾಸ ಪಡೆದು ಸಾಹಿತ್ಯದ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಲಿಂಗಸುಗೂರಿನ ವಿಜಯ ಮಹಾಂತೇಶ್ವರ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಕೊಪ್ಪಳದ ಶ್ರೀ ಗುರು ಗೋಸಾವಿ ಬಾವಾನವರು ಆಶೀರ್ವಚನ ನೀಡಿದರು. ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀಕಾಂತ ಜಾಧವ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಛತ್ರಪ್ಪ ತಂಬೂರಿರವರು ಆಶಯ ನುಡಿಗಳನ್ನು ಹೇಳಿದರು. ಯಾದಗಿರಿಯ ಸುವರ್ಣಬಾಯಿ ರಾಠೋಡ ಹಾಗೂ ಡಾ. ಮಿಟ್ಯಾ ನಾಯ್ಕ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷ ಪ್ರಕಾಶ ರಾಠೋಡ ತರಲಕಟ್ಟಿ ಹಾಗೂ ಶಿವಾನಂದ ನಾಯ್ಕ ಮುಖ್ಯ ಅಭಿಯಂತರರು ರವರು ಸಾಮಾಜಿಕ ಹಾಗೂ ಶೈಕ್ಷಣಿಕ ಜಾಗೃತಿ ಕುರಿತು ಮಾತನಾಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಬಂಜಾರ ಕವಿಗಳಾದ ಡಾ. ಎಲ್.ಪಿ. ಕಠಾರಿ ನಾಯ್ಕ, ಕುಬೇರ ನಾಯ್ಕ, ಜ್ಯೋತಿ ಕೃಷ್ಣನಾಯ್ಕ ಬಾಗಲಕೋಟೆ, ಮೋತಿಲಾಲ್ ರಾಠೋಡ ಹುಬ್ಬಳ್ಳಿ, ಪ್ರವೀಣಕಮಾರ ಹರಪನಹಳ್ಳಿ, ಮೂರ್ತಿ ಎಲ್., ಸುರೇಶ ಕಲಾಪ್ರಿಯ, ಲಕ್ಷ್ಮಣ ನಾಯ್ಕ ಎ.ಐ.ಬಿ.ಎಸ್.ಎಸ್, ವಸಂತ್ ಚವ್ಹಾಣ ವಿಜಯಪುರ, ದೀಪಾ ರಾಠೋಡ ಕಾರಟಗಿ, ಪುಷ್ಪಾಬಾಯಿ ಹೂವಿನಹಡಗಲಿ, ಶಂಕರ ನಾಯ್ಕ, ಕುಮಾರ ರಾಠೋಡ, ಕೂಪಳಗಡ್ ಬಹಾದ್ದೂರ ಬಂಡಾ ಟ್ರಸ್ಟನ ಅಧ್ಯಕ್ಷರಾದ ಭರತ ನಾಯ್ಕ, ಗಂಗಾವತಿಯ ಶಿವಪ್ಪ ಜಾಗೊ, ರವಿನಾಯ್ಕ ಚವ್ಹಾಣ, ಪಾಂಡುನಾಯ್ಕ, ವೆಂಕಟೇಶ ನಾಯ್ಕ ಹಾಗೂ ಅನೇಕ ಕವಿಗಳು, ಹಿರಿಯರು, ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

*ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ*
  • *ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ
    ಕಿಷ್ಕಿಂಧವಾಣಿ ಸುದ್ದಿ
    ಬೆಂಗಳೂರು:
    ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ.
    ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್‌ ಕ್ಯಾಂಪಸ್‌ನಲ್ಲಿ ನಡೆಯಲಿದೆ.
    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು.
    ಆಸಕ್ತ ಪತ್ರಕರ್ತೆಯರು ಗೂಗಲ್‌ ಫಾರ್ಮ್‌ https://forms.gle/tozr4GxUQibDHBvk9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.
    • ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತೆಯರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.
    • ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು.
    • ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್‌ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್‌ಸ್ಕಿಲ್‌ ಅಭಿವೃದ್ಧಿ ಮತ್ತು ನಾಯಕತ್ವ ತರಬೇತಿ ನೀಡಲಾಗುವುದು.

    ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ.
    • ಅರ್ಜಿ ಸಲ್ಲಿಸಲು ಮಾರ್ಚ್ 10, 2026 ಕೊನೆಯ ದಿನವಾಗಿದೆ.

Read More *ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ*

ಇವತ್ತಿನ‌ ಸಮಾಜಕ್ಕೆ ಕತ್ತರಿಗಳಲ್ಲ: ಸೂಜಿಗಳ ಅಗತ್ಯವಿದೆ: ಕೆ.ವಿ.ಪ್ರಭಾಕರ್ ಅಭಿಮತ *ಬರೆದ ಪ್ರತೀ ವರದಿ-ತೋರಿಸಿದ ಪ್ರತಿ ಸುದ್ದಿ-ಕ್ಯಾಮರಾ ಎದುರು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದುವ ಹೊಣೆಗಾರಿ ಪತ್ರಕರ್ತರಾಗಿ: ಕೆ.ವಿ.ಪ್ರಭಾಕರ್ ಕರೆ.

ಕಿಷ್ಕಿಂಧವಾಣಿ ಸುದ್ದಿ
ಬೆಂಗಳೂರು:
ಪ್ರಸ್ತುತ ಸಾಮಾಜಿಕ ಬೆಸುಗೆಯನ್ನು ಕತ್ತರಿಸುವ ಕತ್ತರಿಗಳು ಜನ‌ಸಮುದಾಯದ ಪ್ರಜ್ಞೆಯನ್ನು ರೂಪಿಸುತ್ತಿವೆ. ಇಂಥಾ ಹೊತ್ತಲ್ಲಿ ಸಮಾಜವನ್ನು ಪರಸ್ಪರ ಹೊಲಿಯುವ ಸೂಜಿಗಳ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವ ವಿದ್ಯಾನಿಲಯ ಆಯೋಜಿಸಿದ್ದ “ಮಾಧ್ಯಮ ಹಬ್ಬ-2026” ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅರಳುವ ಹೂವಿನ ಒಳಗೆ ಮಕರಂದ ಬೆರೆತಿರುವ ಹಾಗೆ ಅರಳುವ ಪತ್ರಕರ್ತ, ಪತ್ರಕರ್ತೆಯ ಒಳಗೆ ಸಾಮಾಜಿಕ ಪ್ರಜ್ಞೆ ಮತ್ತು ನೈತಿಕ ಪ್ರಜ್ಞೆ ಬೆರೆತಿರಬೇಕು ಎಂದರು.
ಜನ ಸಮುದಾಯದ ಪ್ರಜ್ಞೆಯನ್ನು ರೂಪಿಸುವುದು ಪತ್ರಕರ್ತರಾದವರ ಹೊಣೆ. ಜನ‌ ಸಮುದಾಯದ, ಸಮಾಜದ ಪ್ರಜ್ಞೆಯನ್ನು ರೂಪಿಸುವ ನಿಮ್ಮ‌ ಪ್ರಜ್ಞೆಯನ್ನು ಯಾರು ರೂಪಿಸುತ್ತಿದ್ದಾರೆ, ಯಾವುದು ರೂಪಿಸುತ್ತಿದೆ ಎನ್ನುವ ಸ್ಪಷ್ಟ ಎಚ್ಚರ ಇರಬೇಕಾಗುತ್ತದೆ.
ಈ ಎಚ್ಚರ ಇದ್ದಾಗ ತಾನು ಬರೆದ ಪ್ರತೀ ವರದಿ, ತಾನು ತೋರಿಸಿದ ಪ್ರತೀ ಸುದ್ಧಿ, ಕ್ಯಾಮರಾ ಮುಂದೆ ತಾನು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದಿರುವ ಹೊಣೆಗಾರಿ ಪತ್ರಕರ್ತರು ರೂಪುಗೊಳ್ಳುತ್ತಾರೆ.
ಈ ಸಾಮಾಜಿಕ ಎಚ್ಚರ ಬರುವುದು ನಮ್ಮ ನೋಟದಿಂದ. ಸಮಾಜವನ್ನು ನೋಡುವ ಕಣ್ಣುಗಳಿಂದ.
ಯಾರ ಕಣ್ಣುಗಳಿಂದ ಹಾಗೂ ಯಾವ ಕಣ್ಣುಗಳಿಂದ ನಾವು ನೋಡುತ್ತಿದ್ದೇವೆ ಎನ್ನುವುದರ ಮೇಲೆ ನಮ್ಮ ನೋಟ, ನಮ್ಮ ಗ್ರಹಿಕೆ ರೂಪುಗೊಳ್ಳುತ್ತದೆ ಎಂದು ವಿವರಿಸಿದರು.
ಹುಟ್ಟಿದ ಮಗು ಮಾತಿಗೆ ಮೊದಲು ನೋಡಿ ಕಲಿಯುತ್ತದೆ. ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ.
ಪತ್ರಕರ್ತರಾಗುವವರು ಪೂರ್ವಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು “ಇರುವುದನ್ನು ಇರುವ ಹಾಗೆ ಗಮನಿಸಬೇಕು”. ಹೀಗಾದಾಗ ಮಾತ್ರ ಸಾಮಾಜಿಕ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ ಎಂದು ವಿವರಿಸಿದರು.

ವೇದಿಕೆ ಮೇಲಿರುವ ದಿನೇಶ್‌ ಅಮೀನ್ ಮಟ್ಟು ಅವರು ಸೇರಿದಂತೆ ವಡ್ಡರ್ಸೆ ರಘುರಾಮ್ ಶೆಟ್ಟರು, ಪಿ.ಲಂಕೇಶ್, ಖಾದ್ರಿ ಶಾಮಣ್ಣ, ವೈಎನ್ ಕೆ, ಮೊಹರೆ ಹನುಮಂತರಾಯರು, ಡಿವಿಜಿ, ಟಿಎಸ್ ಆರ್ ರೀತಿಯ ಹಲವು ಹಿರಿಯರು ಸೂಜಿಗಳಾಗಿ, ದರ್ಜಿಗಳಾಗಿ, ನೇಕಾರರಾಗಿ ಪತ್ರಿಕಾ ವೃತ್ತಿಯ ಪ್ರಜ್ಞೆಯನ್ನು ರೂಪಿಸುವುದರ ಜೊತೆಗೆ ಸಾಮಾಜಿಕ‌ ಪ್ರಜ್ಞೆಯನ್ನೂ ರೂಪಿಸಿದ್ದಾರೆ. ಸಮಾಜವನ್ನು ಬೆಸೆಯುವ ಬೆಸುಗೆಗಳಾಗಿದ್ದಾರೆ ಎಂದು ಎಲ್ಲರಿಗೂ ಧನ್ಯತೆ ಅರ್ಪಿಸಿದರು.
ಕೇವಲ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ಪತ್ರಿಕೋದ್ಯಮದ‌ ಪಟ್ಟುಗಳನ್ನು ಕಲಿಯಲು ಸಾಧ್ಯವಿಲ್ಲ ಎಂಬುದರ ಬಗ್ಗೆಯೂ ವಿದ್ಯಾರ್ಥಿಗಳು ಸ್ಪಷ್ಡವಾಗಿ ತಿಳಿಯಬೇಕಿದೆ. ಓದು, ಸಂಘಟನೆ ಹಾಗೂ ಸ್ವತಂತ್ರ ಚಿಂತನೆಯಿಂದ ಮಾತ್ರ ಒಳನೋಟಗಳನ್ನು ಪಡೆಯಬಹುದು.‌ ಒಳನೋಟವೇ ಇಲ್ಲದವರಿಗೆ ಪತ್ರಿಕೋದ್ಯಮ ಕೈಹಿಡಿಯದು. ಹಾಗಾಗಿ ಈ ಒಳನೋಟಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ತಮ್ಮ ಒಳಗಣ್ಣುಗಳನ್ನು ತೆರೆದು ತಯಾರಿ ನಡೆಸಿಕೊಳ್ಳಬೇಕಿದೆ. ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಕೂಡ ಪತ್ರಕರ್ತರಾಗಿದ್ದವರು. ಇವರೆಲ್ಲಾ ಪತ್ರಕರ್ತರಾಗಿದ್ದಾಗ ಪತ್ರಿಕೋದ್ಯಮಕ್ಕೆ ಹಣದ ಬಡತನವಿತ್ತು. ಸತ್ಯಕ್ಕೆ ಬಡತನ ಇರಲಿಲ್ಲ. ಈಗ ಹಣದ ಬಡತನದಿಂದ ಹೊರಗೆ ಬಂದಿರುವ ಪತ್ರಿಕೋದ್ಯಮ ಸತ್ಯದ ಬಡತನಕ್ಕೆ ಜಾರಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
ಸತ್ಯಕ್ಕೆ ಹಲವು‌ ಮುಖಗಳು ಇರುತ್ತವೆ. ಆ ಎಲ್ಲ‌ ಮುಖಗಳನ್ನು ನಿರ್ಭಿಡೆಯಾಗಿ ಅನಾವರಣಗೊಳಿಸಲು ಎಲ್ಲ ಜಾತಿ, ಮತ, ಧರ್ಮ, ಆಚಾರ, ವಿಚಾರಗಳನ್ನು ಹೊಂದಿರುವವರು ಮಾಧ್ಯಮ ಕ್ಷೇತ್ರದಲ್ಲಿ ಇದ್ದಷ್ಟು ಮಾಧ್ಯಮ ಕ್ಷೇತ್ರ ಸದೃಢಗೊಳ್ಳುತ್ತದೆ.
ಸ್ವಾತಂತ್ರ್ಯ ಹೋರಾಟದಲ್ಲಿ “ಒಗ್ಗಟ್ಟು” ದೇಶದ ಮೌಲ್ಯವಾಗಿತ್ತು. ಸ್ವಾತಂತ್ರ್ಯಾ ನಂತರ “ವಿವಿಧತೆಯಲ್ಲಿ ಏಕತೆ” ದೇಶದ ಮೌಲ್ಯವಾಗಿತ್ತು. ಭಾರತವನ್ನು ರೂಪಿಸಿದ ಈ ಎರಡೂ ಮೌಲ್ಯಗಳನ್ನೂ ಹಾಳುಗೆಡವುತ್ತಿರುವ ಈ ಹೊತ್ತಲ್ಲಿ “ಬಹುತ್ವ” ನಮ್ಮ ನೆಲದ ಮಂತ್ರವಾಗಿದೆ, ಮೌಲ್ಯವಾಗಿದೆ. ಇದು ಕಾಪಾಡುವ ಹೊಣೆಗಾರಿಕೆ ಹಾಲಿ ಮತ್ತು ಭಾವಿ ಪತ್ರಕರ್ತರ ಮೇಲಿದೆ ಎಂದರು.
ಮಾಧ್ಯಮಗಳಲ್ಲಿ ಆಯಾ ಕಟ್ಟಿನ ಹುದ್ದೆಯಲ್ಲಿರುವವರು ಒಂದೇ ವರ್ಗಕ್ಕೆ ಸೇರಿದರೆ, ಬಹುತ್ವವನ್ನು ಪ್ರತಿನಿಧಿಸಲು ಸಾಧ್ಯವಿಲ್ಲ.
ಇಂದು ಮೊಬೈಲ್ ನಲ್ಲಿ ಹರಿದಾಡುವ ಲಕ್ಷಾಂತರ ಕಟೆಂಟ್ ಗಳು ಬಹುತ್ವದ ನೆಲೆಯಲ್ಲಿಯೇ ಸೃಷ್ಟಿಯಾಗಿವೆ. ಮಾಹಿತಿ ಸಾಗರ ಪತ್ರಿಕೋದ್ಯಮಕ್ಕೆ ಬೆದರಿಕೆಯೆಂದು ಭಾವಿಸಬೇಕಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇಲ್ಲೊಂದು ಸಂಗತಿಯನ್ನು ಮಾಧ್ಯಮ ಕ್ಷೇತ್ರ ಸ್ಷಷ್ಡವಾಗಿ ಅಳವಡಿಸಿಕೊಳ್ಳಬೇಕಿದೆ. ಅದೇನೆಂದರೆ
ಒಂದು ಸಮುದಾಯ, ಒಂದು ಭಾಷೆ, ಒಂದು ಜಾತಿಯ ದನಿಗಳನ್ನಷ್ಟೆ ಕೇಳುತ್ತಿದ್ದ ಕಾಲಘಟ್ಟದಲ್ಲಿ‌ ಕಟೆಂಟ್ ಸುರಿಮಳೆಯಲ್ಲಿ ನಾನಾ ಮಣ್ಣಿಗೆ ಸೇರಿದ ವಿಭಿನ್ನ ದನಿಗಳಿವೆ.
ಈ‌ ಎಲ್ಲಾ ದನಿಗಳಿಂದ ಡಿಜಿಟಲ್ ಮಾಧ್ಯಮ ವರ್ಣಮಯವಾಗಿದೆ ಮತ್ತು ವಿಭಿನ್ನ ದನಿಗಳ‌ ಕಾರಣಕ್ಕೆ ಜನರನ್ನು ಹಿಡಿದಿಡುತ್ತಿದೆ ಎಂದರು.
ಪತ್ರಿಕೆಗಳಲ್ಲಿ ಮೊದಲೆಲ್ಲ ಪ್ರೂಫ್ ರೀಡರ್ ಇರುತ್ತಿದ್ದರು. ಕ್ರಮೇಣ ಆ ಪರಂಪರೆ ಇಲ್ಲವಾಯಿತು. ವಿಷಯ ತಪ್ಪಿಲ್ಲದ ಹಾಗೆ ಅಚ್ಚಿಗೆ ಹೋಗಲು ಪ್ರೂಪ್ ರೀಡರ್ ಹೇಗೆ ಮುಖ್ಯವಾಗುತ್ತಿದ್ದರೋ ಪ್ರಸ್ತುತ ಎಲ್ಲ ಬಗೆಯ ಮಾಧ್ಯಮಗಳಿಗೂ ಬೇಕಿರುವುದು ಫ್ಯಾಕ್ಟ್ ಚೆಕರ್ಸ್.
ಸುಳ್ಳುಗಳ‌ ನಡುವೆ ಸತ್ಯವನ್ನು, ನೈಜ‌ ಸುದ್ದಿಯನ್ನು ಹೆಕ್ಕಿ, ಜನರ ಮುಂದೆ ಪರಿಣಾಮಕಾರಿಯಾಗಿ ಇಡಬಲ್ಲವರು ಮಾತ್ರ ಪರಿಣಾಮಕಾರಿ ಪತ್ರಕರ್ತರಾಗಿ ಮಂಚೂಣಿಗೆ ಬರಲು ಸಾಧ್ಯವಿದೆ.
ಸಾವಿರ ಸುಳ್ಳಿನ ಕಟೆಂಟ್ ಗಳ ನಡುವೆ ಸತ್ಯ ಹೇಳುವ ಕಟೆಂಟ್ ಗಳಿಗೆ ಆರಂಭದಲ್ಲಿ ಹಿನ್ನಡೆಯಾದರೂ ಅದು ಗೆಲ್ಲುತ್ತದೆ. ಆ ಭರವಸೆಯಲ್ಲಿ ಪತ್ರಕರ್ತರು ಸತ್ಯವನ್ನು ಹುಡುಕಬೇಕಿದೆ.
ಈ ಸತ್ಯವನ್ನು ಹುಡುಕುವ ಕಣ್ಣುಗಳನ್ನು, ನೋಟವನ್ನು, ಗ್ರಹಿಕೆಯನ್ನು ಕೊಡುವ ಮೂಲಕ “ಸಾಮಾಜಿಕ ಪ್ರಜ್ಞೆ-ನೈತಿಕ ಪ್ರಜ್ಞೆ ಬೆರೆತ ಪತ್ರಕರ್ತರು ರೂಪುಗೊಳ್ಳಲು ಈ ಕಾರ್ಯಾಗಾರ ನೆರವಾಗಲಿ ಎಂದು ಆಶಿಸಿದರು.
ಹಿರಿಯ ಸಮಾಜವಾದಿ ಚಿಂತಕರೂ, ಪತ್ರಕರ್ತರೂ ಆದ ದಿನೇಶ್ ಅಮೀನ್ ಮಟ್ಟು ಅವರು ಮಾತನಾಡಿ, ” ಬರೆಯುವುದಕ್ಕಿಂತ ಹೆಚ್ಚಾಗಿ ಓದಬೇಕು. ಪತ್ರಕರ್ತರಾಗುವವರಿಗೆ ಓದಿನ‌ ಹಸಿವು ಮತ್ತು ಸಾಮಾಜಿಕ ಜವಾಬ್ದಾರಿ ಇರಬೇಕು. ಸಾಮಾಜಿಕ ಜವಾಬ್ದಾರಿ ಇಲ್ಲದ ಯಾವುದೇ ವೃತ್ತಿ ಸಾಮಾಜಿಕ ಪಾಪ. ಪಾತಕ, ಮೂಡನಂಬಿಕೆಗಳನ್ನು ವಿಜ್ರಂಭಿಸುವವರು ಒಳ್ಳೆ ಪತ್ರಕರ್ತ ಇರಲಿ, ಒಬ್ಬ ಜವಾಬ್ದಾರಿಯುತ ನಾಗರಿಕ ಕೂಡ ಆಗಿರಲು ಸಾಧ್ಯವಿಲ್ಲ. ಅಜ್ಞಾನ, ಅಸೂಕ್ಷ್ಮ ಆಗಿರುವವರು ಪತ್ರಕರ್ತ ಎನ್ನಿಸಲು ಸಾಧ್ಯವೇ ಇಲ್ಲ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಮಾಧ್ಯಮ‌ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಕುಲಪತಿ ಪ್ರೊ.ರಮೇಶ್ ಬಿ, ಕುಲಸಚಿವ ನೀವೀನ್ ಜೋಸೆಫ್, ವಾರ್ತಾ ಇಲಾಖೆ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.